ಪ್ರಾಚಾರ್ಯ ಪ್ರಮೋದ್‌ ಕುಮಾರ್‌ ಬಿ ಇವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ.

ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಸೇವೆಗಾಗಿ ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಇವರಿಗೆ ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’  ಲಭಿಸಿದೆ.   ದ.ಕ. ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ವಿಷಯವಾರು ಉಪನ್ಯಾಸಕರ ಸಂಘ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಮತ್ತು ಸಂತ ಅಲೋಶಿಯಸ್ ಕಾಲೇಜು ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪದವಿಪೂರ್ವ ಕಾಲೇಜು ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದ್ದಾರೆ.