ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ರ‍್ಯಾಂಕ್ ಗಳಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
ವಾಣಿಜ್ಯ ವಿಭಾಗದಲ್ಲಿ 7ನೇ ರ‍್ಯಾಂಕ್ ಪಡೆದ ಆರ್ಯ ದಿನೇಶ್, ವಿಜ್ಞಾನ ವಿಭಾಗದಲ್ಲಿ 9ನೇ ರ‍್ಯಾಂಕ್ ಪಡೆದ ನೀತಿ ಕೆ.ಪಿ., ಕಲಾ ವಿಭಾಗದಲ್ಲಿ 9ನೇ ರ‍್ಯಾಂಕ್ ಪಡೆದ ಶ್ರೇಯಾ ಹೆಚ್.ಎ. ಹಾಗೂ ಅತಿ ಹೆಚ್ಚು ಅಂಕ ಗಳಿಸಿದ ಕಲಾ ವಿಭಾಗದ ವಿಶೇಷ ಚೇತನ ವಿದ್ಯಾರ್ಥಿನಿ ಹಸೀನಾ ಅವರನ್ನು ಹೆಗ್ಗಡೆ ಅವರು ಸನ್ಮಾನಿಸಿ ಹರಸಿದರು.